ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇದೇ ನವೆಂಬರ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರ ವರೆಗೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪೂರೆ ಅಧ್ಯಕ್ಷತೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಯಾವ ಅಧಿಕಣಾರಿಗಳ ವಿರುದ್ಧ ದೂರು ಸಲ್ಲಿಸಬಹುದು..?
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಒದಗಿಸಬೇಕಾದ ಸರ್ಕಾರಿ ಸವಲತ್ತುಗಳು, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುವುದು. ಕಳಪೆ ಕಾಮಗಾರಿ, ಹಣ ದರುಪಯೋಗ ಕುರಿತ ಹಾಗೂ ಸರ್ಕಾರದ ಕಾರ್ಯಗಳು ಮಾಡಿಕೊಡಲು ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ಅಥವಾ ಲಂಚ ಕೇಳುತ್ತಿದ್ದಲ್ಲಿ ಈ ಸಂಬಂಧ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.



