ದಾವಣಗೆರೆ: ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇರೆಗೆ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್ ಉಮೇಶ್ ಹಾಗೂ ಬೆಸ್ಕಾಂ ಜಾಗೃತ ದಳದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್.ಪ್ರಭಾಕರಗೆ ಸೇರಿದ 8 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು (ಜು.11) ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಬಗ್ಗೆ ದೂರುದಾರರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಒಟ್ಟು ಎಂಟು ಕಡೆ ದಾವಣಗೆರೆ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆದಿದೆ.
ಡಿ.ಎಚ್.ಉಮೇಶ್ ಅವರಿಗೆ ಸೇರಿದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಐದು ಸ್ಥಳ ಹಾಗೂ ಪ್ರಭಾಕರ್ ಅವರಿಗೆ ಸೇರಿದ ದಾವಣಗೆರೆಯ ವಿವಿಧೆಡೆಯ ಮೂರು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪ ಮೇಲೆ ದಾಳಿ ನಡೆದಿದೆ.
ದಾವಣಗೆರೆ ಬೆಸ್ಕಾಂ ವಿಜಿಲೆನ್ಸ್ ಅಧಿಕಾರಿ ಎಇಇ ಪ್ರಭಾಕರ್ ಮನೆಯ ಮೇಲೆ ದಾವಣಗೆರೆ ಡಿಎಸ್ಪಿ ಕಲಾವತಿ ಗದಗ ಪಿಐ ಪುರುಷತ್ತೋಮ , ನಗರದ ಎಂಸಿಸಿ ಎ ಬ್ಲಾಕ್ ನಲ್ಲಿರುವ 13 ಮೇನ್ ನಲ್ಲಿರುವ ವಾಸದ ಮನೆ, ಹಾವೇರಿ ಡಿಎಸ್ಪಿ ಬಿ.ಪಿ.ಚಂದ್ರಶೇಖರ್ ದಾವಣಗೆರೆ ನಗರದ ತರಳಬಾಳು ಬಡಾವಣೆಯಲ್ಲಿರುವ ಮಾವನ ಮನೆ ಬಳ್ಳಾರಿ ಲೋಕಾಯುಕ್ತ ಮಹಮ್ಮದ್ ರಫೀಕ್ ದಾವಣಗೆರೆ ಬೆಸ್ಕಾಂ ವಿಜಿಲೆನ್ಸ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ದಾವಣಗೆರೆ, ಹಾವೇರಿ, ಗದಗ ಹಾಗೂ ಬಳ್ಳಾರಿ ಲೋಕಾಯುಕ್ತ ಪೊಲೀಸರ ಎಂಟು ತಂಡ ರಚನೆ ಮಾಡಿಕೊಂಡು ವಿವಿಧ ಕಡೆ ದಾಳಿ ನಡೆಸಿದ್ದಾರೆ.