ದಾವಣಗೆರೆ: ಜಿಲ್ಲಾ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಘಟಕದ ಜಿಲ್ಲಾ ಸಾಂಖಿಕ ಅಧಿಕಾರಿ ಡಾ.ಜಿ.ಎಸ್.ನಾಗರಾಜ್ ಗೆ ಲೋಕಾಯುಕ್ತ ಪೊಲೀಸರು ಇಂದು (ಮಾ.06) ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಮನೆ, ಫಾರಂಹೌಸ್ ಸೇರಿದ ಐದು ಸ್ಥಳಗಳ ಮೇಲೆ ದಾಳಿ ನಡೆಸಿ, ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಅಡಿಕೆಯ ಎಲೆ ಚುಕ್ಕೆ, ಹಳದಿ ಎಲೆ ರೋಗಕ್ಕೆ ಶೀಘ್ರ ಪರಿಹಾರ; ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ನಾಗರಾಜ್ ಮನೆ, ತಂದೆ ಷಣ್ಮುಖಪ್ಪ ನಿವಾಸ, ಫಾರಂಹೌಸ್, ಕಚೇರಿ ಹಾಗೂ ಕುಟುಂಬದ ಅಧೀನದಲ್ಲಿ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಚಿನ್ನಾಭರಣ, ಹಣ ಸೇರಿ ಸಂಪತ್ತು ಪತ್ತೆಯಾಗಿದೆ.
ದಾವಣಗೆರೆ: ಮಾ.05 ಅಡಿಕೆ ಧಾರಣೆ; ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಲೋಕಾಯುಕ್ತ ಡಿವೈಎಸ್ಪಿ, ಇನ್ಸ್ಪೆಕ್ಟರ್ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದರು. ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಆರೋಪದ ಮೇರೆಗೆ ನಾಗರಾಜ್ ಗೆ ಸೇರಿದ ಐದು ಸ್ಥಳಗಳ ಮೇಲೆ ದಾಳಿ ನಡೆದಿದೆ. ಇನ್ನೂ ಪರಿಶೀಲನೆ ಮಾಡಲಾಗುತ್ತಿದೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪುರೆ ಮಾಹಿತಿ ನೀಡಿದ್ದಾರೆ.