ದಾವಣಗೆರೆ: ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ದಾವಣಗೆರೆ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ ಬರೋಬ್ಬರಿ 1 ಕೆಜಿ ಚಿನ್ನಾಭರಣ ಹಾಗೂ 15 ಲಕ್ಷ ನಗದು ಪತ್ತೆಯಾಗಿದೆ.
ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಬಿಬಿಎಂಪಿ ಎಇಇ ಎಚ್.ಭಾರತಿ ಅವರ ದಾವಣಗೆರೆಯ ಜಯನಗರ ನಿವಾಸದ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಚ್. ಭಾರತಿ ದಾವಣಗೆರೆ ಮಹಾನಗರ ಪಾಲಿಕೆಯ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು ಸದ್ಯ ಬಿಬಿಎಂಪಿ ಎಇಇ ಆಗಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತರ ದಾಳಿ, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈವರೆಗೆ 1 ಕೆಜಿಗೂ ಅಧಿಕ ಚಿನ್ನಾಭರಣ, 15ಲಕ್ಷ ನಗದು ಪತ್ತೆಯಾದ ವರದುಯಾಗಿದೆ.
ರಾಜ್ಯದಲ್ಲಿ ಸುಮಾರು 18 ಅಧಿಕಾರಿಗಳ ವಿರುದ್ಧ 48 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇಲೆ ಕಣ್ಣಿಡಲಾಗಿದ್ದ ಅಧಿಕಾರಿಗಳ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಲಗ್ಗೆ ಇಟ್ಟಿದ್ದರು.