ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ದೇವಿಕೆರೆ ಗ್ರಾಮ ಪಂಚಾಯತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೇವಿಕೆರೆ ಪಿಡಿಒ ಬಸವರಾಜಪ್ಪ ದಾವಣಗೆರೆ ನಗರದ ಪಿ.ಬಿ ರಸ್ತೆಯ ದ್ವಾರಕ ಹೋಟೆಲ್ ನಲ್ಲಿ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಾಂತಪ್ಪ ಎಂಬುವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಆಜನೇಯ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.



