ದಾವಣಗೆರೆ; ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿದ್ದ ನಿವೃತ್ತ ಐಎಫ್‌ಎಸ್ ಅಧಿಕಾರಿ ಹಾಗೂ ತಹಶೀಲ್ದಾರ್ ಮನೆ ಹಾಗೂ ಇತರಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಶಿವಮೊಗ್ಗ ವನ್ಯಜೀವಿ ವಿಭಾಗದ ನಿವೃತ್ತ ಡಿಎಫ್ಓ ಐ.ಎಂ.ನಾಗರಾಜ್ ದಾವಣಗೆರೆ ಮತ್ತು ಶಿವಮೊಗ್ಗದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
2022ರ ಡಿಸಂಬರ್ ನಲ್ಲಿ ನಾಗರಾಜದ ನಿವೃತ್ತರಾಗಿದ್ದರು. ಇವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರು ಕೇಳಿ ಬಂದ ಕಾರಣ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆ, ಲಗಾನ್ ಮಂದಿರದ ಹಿಂಭಾಗದ ವಿಸ್ಮಯ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೆ ಸಾಗರ ರಸ್ತೆಯ ಪೆಟ್ರೋಲ್ ಬಂಕ್ ಸೇರಿದಂತೆ ದಾವಣಗೆರೆ ಜಿಲ್ಲೆ ಹೂನ್ನಾಳಿಯಲ್ಲೂ ಸಹ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಹಲವು ಮಹತ್ವ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.
ಇದಲ್ಲದೆ ಮತ್ತೊಂದು ಪ್ರಕರಣದಲ್ಲಿ ಈ ಹಿಂದೆ ಶಿವಮೊಗ್ಗದ ತಹಶೀಲ್ದಾರ್ ಆಗಿದ್ದ, ಹಾಲಿ ಚಿತ್ರದುರ್ಗ ಜಿಲ್ಲೆ ಹೊಳಲ್ಕರೆ ತಹಶೀಲ್ದಾರ್ ಆಗಿರುವ ನಾಗರಾಜ್ ಅವರ ಮನೆ ಮೇಲೆಯೂ ಲೋಕಾಯುಕ್ತ ದಾಳಿಯಾಗಿದೆ. ಅವರ ಸಂಬಂಧಿಕರ ಮನೆ ಶಿಕಾರಿಪುರದ ಚನ್ನಕೇಶವ ನಗರದಲ್ಲಿ ಈ ದಾಳಿ ನಡೆಸಲಾಗಿದೆ. ಒಂದೆಡೆ ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಸಂತ ಕುಮಾರ ನೇತೃತ್ವದಲ್ಲಿ 7 ಕಡೆ ದಾಳಿ ನಡೆದರೆ, ಮತ್ತೊಂದೆಡೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ.