ದಾವಣಗೆರೆ: 30 ಸಾವಿರ ಲಂಚ ಸ್ವೀಕರಿಸುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ವಿಶೇಷ ಭೂಸ್ವಾದಿನಾಧಿಕಾರಿ ಜಿಡಿ ಶೇಖರ್ , ಶಿರಸ್ತೇದಾರ್ ಶ್ರೀನಿವಾಸ ಅವರು ಬಲೆಗೆ ಬಿದ್ದವರಾಗಿದ್ದಾರೆ. ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದಾಗ ಈ ದಾಳಿ ನಡೆಸಲಾಗಿದೆ.
ಕೋಳೂರಿನ ಸಂತೋಷ್ ಅವರಿಂದ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಭೂಸ್ವಾಧಿನಾಧಿಕಾರಿಜಿಡಿ ಶೇಖರ್ ಹಾಗೂ ಶಿರಸ್ತೇದಾರ್ ಶ್ರೀನಿವಾಸ್ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ ಎಸ್ ಕೌಲಾಪುರ ನೇತೃತ್ವದಲ್ಲಿ ದಾಳಿ ನಡೆದಿದೆ.



