Connect with us

Dvgsuddi Kannada | online news portal | Kannada news online

ದಾವಣಗೆರೆ ಲೋಕಸಭಾ ಚುನಾವಣೆ; ನಾಳೆಯಿಂದ ನಾಮಪತ್ರ ಸಲ್ಲಿಕೆ ಶುರು; ಬೆಳಗ್ಗೆ 11 ರಿಂದ ಮ.3 ರ ವರೆಗೆ ಅವಕಾಶ-ಏ.19 ಕೊನೆ ದಿನ

ದಾವಣಗೆರೆ

ದಾವಣಗೆರೆ ಲೋಕಸಭಾ ಚುನಾವಣೆ; ನಾಳೆಯಿಂದ ನಾಮಪತ್ರ ಸಲ್ಲಿಕೆ ಶುರು; ಬೆಳಗ್ಗೆ 11 ರಿಂದ ಮ.3 ರ ವರೆಗೆ ಅವಕಾಶ-ಏ.19 ಕೊನೆ ದಿನ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ನಾಳೆಯಿಂದ (ಏಪ್ರಿಲ್ 12) ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಕರ್ತವ್ಯ ದಿನಗಳಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಿರುವ ಚುನಾವಣಾಧಿಕಾರಿಗಳ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ಜಿಲ್ಲಾಧಿಕಾರಿ ಚುನಾವಣಾಧಿಕಾರಿಯಾಗಿದ್ದು, ಅಪರ ಜಿಲ್ಲಾಧಿಕಾರಿ ಸಹಾಯಕ ಚುಣಾವಣಾಧಿಕಾರಿಯಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿರುತ್ತದೆ ಎಂದರು.

ನಾಮಪತ್ರ ಸಲ್ಲಿಸಲು ರಾಷ್ಟ್ರೀಕೃತ, ಮಾನ್ಯತೆ ಪಡೆದ ಪಕ್ಷಗಳ ಅಭ್ಯರ್ಥಿಗಳು ಇದೇ ಕ್ಷೇತ್ರದ ಮತದಾರೊಬ್ಬರು ಸೂಚಕರಾಗಿರಬೇಕು. ಮಾನ್ಯತೆ ಪಡೆಯದ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಇದೇ ಕ್ಷೇತ್ರದ 10 ಮತದಾರರು ಸೂಚಕರಾಗಿರಬೇಕು. ಸಾಮಾನ್ಯ ವರ್ಗದವರು ರೂ.25000 ಮತ್ತು ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳು ರೂ.12500 ಗಳನ್ನು ನಗದಾಗಿ ಮಾತ್ರ ಠೇವಣಿ ಸಲ್ಲಿಸಬೇಕಾಗುತ್ತದೆ. ಒಬ್ಬ ಅಭ್ಯರ್ಥಿಯು ಗರಿಷ್ಠ 4 ನಾಮಪತ್ರ ಮತ್ತು ಎರಡು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಚುನಾವಣಾ ಅಭ್ಯರ್ಥಿಯಾಗಲು ಕನಿಷ್ಠ 25 ವರ್ಷ ತುಂಬಿರಬೇಕು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳಿಗೆ ಚುನಾವಣಾ ಕಚೇರಿಯ 100 ಮೀಟರ್ ವ್ಯಾಪ್ತಿಗೆ ಆಗಮಿಸಲು 3 ವಾಹನಗಳಿಗೆ ಅವಕಾಶ ಇರುತ್ತದೆ. ಮತ್ತು ನಾಮಪತ್ರ ಸಲ್ಲಿಸುವಾಗ ಒಂದು ಭಾರಿಗೆ ಅಭ್ಯರ್ಥಿ ಸೇರಿ 5 ಜನರಿಗೆ ಮಾತ್ರ ಅವಕಾಶ ಇರುತ್ತದೆ. ನಮೂನೆ-26 ರಲ್ಲಿ 4 ಪ್ರತಿಗಳಲ್ಲಿ ಘೋಷಣಾ ಪ್ರಮಾಣಪತ್ರ ಸಲ್ಲಿಸಬೇಕಿದ್ದು ಎಲ್ಲಾ ಅಂಕಣಗಳ ಮಾಹಿತಿ ನೀಡಬೇಕು. ನಾಮಪತ್ರ ಸಲ್ಲಿಸುವ ಒಂದು ದಿನ ಮೊದಲು ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಅಭ್ಯರ್ಥಿ ಅಥವಾ ಚುನಾವಣಾ ಏಜೆಂಟರ ಜಂಟಿಯಾಗಿ ಖಾತೆ ತೆರೆಯಬಹುದು, ಕುಟುಂಬಸ್ಥರ ಹೆಸರಿನೊಂದಿಗೆ ಜಂಟಿ ಖಾತೆ ಇರಬಾರದು, ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳಿದ್ದಲ್ಲಿ ಮತದಾನಕ್ಕಿಂತ ಮೊದಲು ಮಾಧ್ಯಮಗಳಲ್ಲಿ ಮೂರು ಭಾರಿ ಪ್ರಚುರಪಡಿಸಿರಬೇಕೆಂದರು.

ನಾಮಪತ್ರಗಳ ಪರಿಶೀಲನೆಯು ಏಪ್ರಿಲ್ 20 ರಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಏಪ್ರಿಲ್ 22 ರ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಇರುತ್ತದೆ. ನಂತರ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಿಗೆ ಚುನಾವಣಾ ಚಿನ್ಹೆಯನ್ನು ನೀಡುವ ಮೂಲಕ ಅಂತಿಮ ಕಣದಲ್ಲಿನ ಅಭ್ಯರ್ಥಿಗಳ ವಿವರವನ್ನು ಪ್ರಕಟಿಸಲಾಗುತ್ತದೆ. ಮೇ 7 ರಂದು ಮತದಾನ ಮತ್ತು ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದರು.

ನಂ.13 ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ 8 ವಿಧಾನಸಭಾ ಕ್ಷೇತ್ರದ ಮತದಾರರು; ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಿ 8 ವಿಧಾನಸಭಾ ಕ್ಷೇತ್ರಗಳು ಒಳಪಡಲಿವೆ. ಇಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸುವರು. ಜಗಳೂರು, ಹರಪನಹಳ್ಳಿ, ಹರಿಹರ, ದಾವಣಗೆರೆ ಉತ್ತರ, ದಕ್ಷಿಣ, ಮಾಯಕೊಂಡ, ಚನ್ನಗಿರಿ, ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳು ಸೇರಿವೆ. ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1946 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಇದರಲ್ಲಿ 387 ಕ್ರಿಟಿಕಲ್, 11 ವಲ್ನೇರಬಲ್ ಮತಗಟ್ಟೆಗಳಿವೆ.

ಈ ಎಲ್ಲಾ ಕ್ಷೇತ್ರಗಳಲ್ಲಿ ಏಪ್ರಿಲ್ 10 ರ ವರೆಗೆ 8,50,393 ಪುರುಷ, 8,55,079 ಮಹಿಳೆಯವರು, 135 ಇತರೆ ಹಾಗೂ 562 ಸೇವಾ ಮತದಾರರು ಸೇರಿ 17,06,169 ಒಟ್ಟು ಮತದಾರರಿದ್ದಾರೆ. ಏ.9 ರ ವರೆಗೆ ನಮೂನೆ-6 ರಲ್ಲಿ 42664 ಅರ್ಜಿಗಳು ಸ್ವೀಕೃತವಾಗಿದ್ದು ಪರಿಶೀಲನೆಯ ಹಂತದಲ್ಲಿವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top