Connect with us

Dvgsuddi Kannada | online news portal | Kannada news online

ಲಂಚ ಪ್ರಕರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ

ಪ್ರಮುಖ ಸುದ್ದಿ

ಲಂಚ ಪ್ರಕರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ

ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾದ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಆದೇಶ ನೀಡಿದೆ. ಹೀಗಾಗಿ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಾಗಿದೆ.

ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.

ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲ ಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top