Connect with us

Dvgsuddi Kannada | online news portal | Kannada news online

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

images 27 1

ಪ್ರಮುಖ ಸುದ್ದಿ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ನೀರಾವರಿ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳ ಸೌಲಭ್ಯ ಪಡೆಯಲಯ ಅರ್ಜಿ ಸಲ್ಲಿಸಬಹುದು.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kmmd.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22374832/ 8050770004/ 8050770005 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದೆಂದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top