ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ಯಾರು ಅರ್ಹರು..?
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.



