ಬೆಂಗಳೂರು: ಸರ್ಕಾರ 10 ಮಹಾನಗರ ಪಾಲಿಕೆಗಳಿಗೆ 24 ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ಇಂದು ಪ್ರಕಟಿಸಿದೆ. ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನಕ್ಕೆ ಬಿಸಿಎ ಮಹಿಳೆಗೆ ಮೀಸಲಾತಿ ನಿಗದಿ ಮಾಡಿ ಆದೇಶ ಹೊರಡಿಸಿದೆ.
ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಆಯ್ಕೆಗೆ ರಾಜ್ಯಸರ್ಕಾರ ಮೀಸಲಾತಿ ಪಟ್ಟಿಯನ್ನು ಇಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.




