ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಗೃಹಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡಲಾಯಿತು.ಒಟ್ಟು 381 ವಸತಿಗೃಹಗಳನ್ನು ಫಲಾನುಭವಿ ಪೌರಕಾರ್ಮಿಕರಿಗೆ ಲಾಟರಿ ಮೂಲಕ ಹಂಚಿಕೆ ಮಾಡುವ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಹಾಪೌರ ವಿನಾಯಕ ಬಿ. ಹೆಚ್., ಉಪಮಹಾಪೌರರಾದ ಯಶೋಧ ಯಗ್ಗಪ್ಪ, ಆಯುಕ್ತೆ ರೇಣುಕಾ ಮಾಜಿ ಮಹಾಪೌರರಾದ ಎಸ್. ಟಿ. ವೀರೇಶ್, ಮಹಾನಗರ ಪಾಲಿಕೆ ಸದಸ್ಯರಾದ ಚಮನ್ ಸಾಬ್, ಎಲ್. ಡಿ. ಗೋಣೆಪ್ಪ, ಸೋಗಿ ಶಾಂತಕುಮಾರ್, ಗಾಯತ್ರಿಬಾಯಿ, ಉದಯ್ ಕುಮಾರ್ ಮತ್ತು ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ದಾವಣಗೆರೆ: ಮಹಾನಗರ ಪಾಲಿಕೆಯಿಂದ ಲಾಟರಿ ಮೂಲಕ ವಸತಿ ಗೃಹಗಳ ಹಂಚಿಕೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment