ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳಲ್ಲಿ 3 ಸ್ಥಾಯಿ ಸಮಿತಿಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಾಜಿ ಉಪ ಮೇಯರ್ ಅಬ್ದುಲ್ ಲತೀಫ್, ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಚ್. ಉದಯಕುಮಾರ್ ಹಾಗೂ ಸಾರ್ವಜನಿಕ ಆರೋಗ್ಯ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮೀನಾಕ್ಷಿ ಜಗದೀಶ್ ನೇಮಕ ಮಾಡಲಾಯಿತು. ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆಗೆ ಸದಸ್ಯರೊಬ್ಬರ ಗೈರು ಹಾಜರಿಯಿಂದ ಮುಂಡಲಾಗಿದೆ.