ದಾವಣಗೆರೆ: ಏ.10 ರಂದು ಶ್ರೀರಾಮ ನವಮಿ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಹೀಗಾಗಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಏ. 10 ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ. ತಪ್ಪಿದಲ್ಲಿ ಮಹಾನಗರ ಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



