Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಜಾಹೀರಾತಿಗೆ ಅನುಮತಿ ಕಡ್ಡಾಯ

ಪ್ರಮುಖ ಸುದ್ದಿ

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಜಾಹೀರಾತಿಗೆ ಅನುಮತಿ ಕಡ್ಡಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲೆಕ್ಸ್‍ಗಳ ಮೂಲಕ ಜಾಹೀರಾತುಗಳನ್ನು ಪ್ರದರ್ಶಿಸಲು ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ತಪ್ಪಿದ್ದಲ್ಲಿ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976 ರ ಕಲಂ 138 ರೀತ್ಯಾ ಅಂತಹ ಜಾಹಿರಾತುಗಳನ್ನು ತೆಗೆದು ಹಾಕಲಾಗುವುದು  ಎಂದು ಪಾಲಿಕೆ ಆಯುಕ್ತರಾದ ವಿಶ್ವನಾಥ.ಪಿ.ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಹಾನಗರಪಾಲಿಕೆಯ ಅನುಮತಿ ಪಡೆದುಕೊಳ್ಳದೇ ಶುಭಾಶಯ, ಅಭಿನಂದನೆ ಅಥವಾ ವಾಣಿಜ್ಯ ಹಾಗೂ ಇತ್ಯಾದಿ ಜಾಹಿರಾತುಗಳುಳ್ಳ ಪ್ಲೆಕ್ಸ್‍ಗಳನ್ನು ಅನಧಿಕೃತವಾಗಿ ಹಾಕುತ್ತಿರುವುದು ಕಂಡುಬರುತ್ತಿವೆ.  ನಗರ ಸೌಂದರ್ಯ ಹಾಗೂ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ. ಆದ್ದರಿಂದ ಯಾವುದೇ ವ್ಯಕ್ತಿಯಾಗಲೀ ಅಥವಾ ಸಂಸ್ಥೆಯಾಗಲೀ ಜಾಹಿರಾತು ಪ್ರದರ್ಶನಕ್ಕೆ ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳದೆ ಹಾಕಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top