ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ, ಕನ್ನಡಪರ ಸಂಘ-ಸಂಸ್ಥೆಗಳು, ಮತ್ತು ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಡಿ.28 ರಂದು ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರ ಮಹಾನಗರಪಾಲಿಕೆ ಆವರಣ ದಾವಣಗೆರೆ ಇಲ್ಲಿ ಏರ್ಪಡಿಸಲಾಗಿದೆ.
ಬೆಳಿಗ್ಗೆ 7.30ಕ್ಕೆ ಮಹಾಪೌರ ಎಸ್.ಟಿ. ವೀರೇಶ್ ಪಾಲಿಕೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವರು. ನಿವೃತ್ತ ಮುಖ್ಯೋಪಾಧ್ಯಾಯ ಕೆ. ಇಮಾಮ್ ಮೆರವಣಿಗೆಗೆ ಚಾಲನೆ ನೀಡುವರು. ಸಂಜೆ 5.30 ಗಂಟೆಗೆ ಜರುಗುವ ಸಮಾರಂಭವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸುವರು. ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ಅಧ್ಯಕ್ಷತೆ ವಹಿಸುವರು. ಸಂಸದ ಡಾ.ಜಿ.ಎಂ ಸಿದ್ದೇಶ್ವರ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಶಾಸಕ ಎಸ್.ಎ ರವೀಂದ್ರನಾಥ್ ಅವರು ಭುವನೇಶ್ವರಿಗೆ ಪುಪ್ಪಾರ್ಚನೆ ನೆರವೇರಿಸುವರು. ಮೈಸೂರಿನ ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಜಿ.ರಘು ಆಚಾರ್, ಲಹರ್‍ಸಿಂಗ್ ಸಿರೋಯಾ, ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಚಿದಾನಂದ ಎಂ ಗೌಡ, ಆರ್.ಶಂಕರ್, ಡಾ.ವೈ.ಎ.ನಾರಾಯಣಸ್ವಾಮಿ, ಯು.ಬಿ ವೆಂಕಟೇಶ್, ಮಹಾನಗರಪಾಲಿಕೆ ಉಪಮಹಾಪೌರರಾದ ಶಿಲ್ಪಜಯಪ್ರಕಾಶ್, ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಡಾ.ವಿಜಯಮಹಾಂತೇಶ್ ಬಿ.ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ನಗರಪಾಲಿಕೆಯ ವಿವಿಧ ಸ್ಥಾಯಿಸಮಿತಿಗಳ ಅಧ್ಯಕ್ಷರು, ಗಣ್ಯರು, ಕನ್ನಡಪರ ಹೋರಾಟಗಾರರು, ಪತ್ರಕರ್ತರು ಭಾಗವಹಿಸುವರು.



