ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಿಸಲಾಗಿದೆ.
ಶೇ.5 ರಷ್ಟು ರಿಯಾಯಿತಿಯ ಕಾಲಾವಧಿಯನ್ನು ಏಪ್ರಿಲ್ ತಿಂಗಳ ಅಂತ್ಯದವರೆಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಅತಿ ತೀವ್ರವಾಗಿ ಹರಡುತ್ತಿದ್ದು, ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಮತ್ತು ಪ್ರತ್ಯೇಕತೆಯನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಆಸ್ತಿ ತೆರಿಗೆ ಮೇಲಿನ ಶೇ.5 ರಿಯಾಯಿತಿಯನ್ನು ಸರ್ಕಾರದ ಆದೇಶದಂತೆ 2021ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



