ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್‍ನ್ನು ಪಡೆದರು. ಲಸಿಕೆ ಪಡೆದ ನಂತರ ಅರ್ಧ ಗಂಟೆ ನಿಗಾವಣೆಯಲ್ಲಿದ್ದು, ನಂತರ ಮನೆಗೆ ತೆರಳಿದರು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಡಾ.ರಾಘವೇಂದ್ರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.