ದಾವಣಗೆರೆ: ಜಿಲ್ಲೆಯ ಹರಹರ ತಾಲ್ಲೂಕಿನ ಮಲೇಬೆನ್ನೂರು ಪುರಸಭೆ ಫಲಿತಾಂಶ ಇಂದು (ಡಿ. 29) ಪ್ರಕಟವಾಗಿದ್ದು, ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಲಭಿಸಿದೆ. ಒಟ್ಟು 23 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಇಬ್ಬರ ಅವಿರೋಧ ಆಯ್ಕೆ ಸೇರಿ ಕಾಂಗ್ರೆಸ್ 12, ಬಿಜೆಪಿಯ 7, ಜೆಡಿಎಸ್‌ನ 3 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವಿನ ಸಾಧಿಸಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್‌ನ 8, ಬಿಜೆಪಿಯ 7, ಜೆಡಿಎಸ್ 5 ಹಾಗೂ ಐವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಹೆಚ್ಚು ಸ್ಥಾನ ಪಡೆದುಕೊಂಡರೆ, ಬಿಜೆಪಿ ಕಳೆದ ಬಾರಿಯಷ್ಟೇ ಸ್ಥಾನ ಉಳಿಸಿಕೊಂಡಿದೆ. ಜೆಡಿಎಸ್ ಎರಡು ಸ್ಥಾನಗಳನ್ನು ಕಳೆದುಕೊಂಡಿದ್ದು, ಈ ಬಾರಿ ಒಂದು ಸ್ಥಾನ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.



