ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಆವರಣದಲ್ಲಿ ಯಾವುದೇ ರೀತಿಯ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲವೆಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.



