ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಮ್ಮ ಗೋಪಿನಾಯ್ಕ್, ಉಪ ಮೇಯರ್ ಆಗಿ ಗಾಯತ್ರಿಬಾಯಿ ಖಂಡೋಜಿ ಅವರು ಕಚೇರಿಗೆ ಪೂಜೆ ಸಲ್ಲಿಸಿ ಇಂದು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಜಿ.ಎಂ.ಸಿದೇಶ್ವರ್, ಶಾಸಕ ಎಸ್.ಎ.ರವೀಂದ್ರನಾಥ್, ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್.ಶಿವಯೋಗಿ ಸ್ವಾಮಿ, ದೂಢಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಮೇಯರ್ ಗಳಾದ ಬಿ.ಜಿ. ಅಜಯ್ ಕುಮಾರ್, ಎಸ್.ಟಿ. ವೀರೇಶ್, ದೂಢಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.