ದಾವಣಗೆರೆ: ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಸ್ನಾತಕೋತ್ತರ ವೃತ್ತಿಪರ ಕೋರ್ಸ್‍ಗಳಾ ಎಂಸಿಎ, ಎಂಬಿಎ ಕೋರ್ಸ್‍ಗಳ ಪ್ರವೇಶಕ್ಕೆ ಜೂನ್ 22 ರಂದು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರಿಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30ರವರೆಗೆ ಎಂ.ಸಿ.ಎ ಕೋರ್ಸುಗೆ ಪರೀಕ್ಷೆ ನಡೆಯಲಿದ್ದು 1269 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಹಾಗೂ ಮಧ್ಯಾಹ್ನ 2.30 ರಿಂದ 4.30ರವರೆಗೆ ಎಂ.ಬಿ.ಎ ಕೋರ್ಸುಗೆ ಪರೀಕ್ಷೆ ನಡೆಯಲಿದ್ದು 1694 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.
ಪರೀಕ್ಷೆಯಲ್ಲಿ ನಿಯಮದಂತೆ ನಡೆಸಬೇಕು, ಯಾವುದೇ ಅನುಮಾನ, ಗೊಂದಲಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ನಡೆಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಡಿಡಿಪಿಯು ಕರಿಸಿದ್ದಪ್ಪ ಮಾತನಾಡಿ, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ದತೆಗಳನ್ನು ಕೈಗೊಂಡಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ದಿನದಂದು ಅಗತ್ಯ ಜಾಗೃತ ದಳ ಸಿಬ್ಬಂದಿಯನ್ನು ನೇಮಸಿಲಾಗಿದೆ.
ಕೇಂದ್ರಗಳಲ್ಲಿ ಕೇಂದ್ರದ ಪ್ರಾಂಶುಪಾಲರು ಸಿಸಿಟಿವಿ ಚಿತ್ರಣಗಳನ್ನ ಸಂಪೂರ್ಣವಾಗಿ ರೆಕಾರ್ಡ್ ಮಾಡಿ ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಿ ಗೌಪ್ಯತಾ ಬಂಡಲು ಹಾಗೆಯೇ ಪರೀಕ್ಷಾ ಕಾರ್ಯ ಮುಕ್ತಾಯವಾದ ನಂತರ ರಹಸ್ಯ ಬಂಡಲುಗಳನ್ನು ಅಂಚೆ ಕಚೇರಿಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕಳುಹಿಸಲಾಗುವುದು. ಒಟ್ಟಿನಲ್ಲಿ ಈ ಪ್ರವೇಶ ಪರೀಕ್ಷೆಯನ್ನು ಯಾವುದೇ ದೋಷಪೂರಿತವಾಗದಂತೆ ವ್ಯವಸ್ಥಿತ ಮತ್ತು ಸಮರ್ಥವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.



