Connect with us

Dvgsuddi Kannada | online news portal | Kannada news online

ದಾವಣಗೆರೆ: ವೈದ್ಯಕೀಯ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಸಾಲಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವೈದ್ಯಕೀಯ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಸಾಲಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022-23 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಆಯ್ಕೆಯಾಗುವ ಸಿಇಟಿ/ನೀಟ್ ಮುಖಾಂತರ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್, ಬಿ.ಟೆಕ್, ಮತ್ತು ಬಿ.ಆಯುಷ್ ಕೋರ್ಸ್‍ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ ವೆಬ್‍ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಕಾಪಿಗಳನ್ನು ಹಾಗೂ kmdconline.karnataka.gov.in ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜುಲೈ. 20 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ ಜಯದೇವ ಸರ್ಕಲ್ ಹತ್ತಿರ, ಫೋ. 08192232349 ಗೆ ಸಂಪರ್ಕಿಸಬಹುದುದೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top