Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾಜಿ ಸೈನಿಕ ಮಕ್ಕಳಿಗೆ ವೈದ್ಯಕೀಯ ಸೀಟು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮಾಜಿ ಸೈನಿಕ ಮಕ್ಕಳಿಗೆ ವೈದ್ಯಕೀಯ ಸೀಟು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಭಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶ ಬಂದ 30 ದಿನಗಳೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರವನ್ನು ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ ಆನ್‍ಲೈನ್ ಮೂಲಕ ಕೆ.ಎಸ್.ಬಿ. ಜಾಲತಾಣ www.ksb.gov.in ರಲ್ಲಿ ಅವಶ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220925 ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top