ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿರುಸಿನ ಪ್ರಚಾರದ ಮಧ್ಯೆ ಬಿಡುವು ಮಾಡಿಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ, ಪೀಠಾಧಿಪತಿ ವಚನಾನಂದ ಶ್ರೀಗಳ ಆಶೀರ್ವಾದ ಪಡೆದರು.
ಶ್ರೀಗಳ ಜೊತೆ ಅಮಿತ್ ಶಾ ಅವರು ಸಮಾಲೋಚನೆ ನಡೆಸಿದರು. ಹರ ಕ್ಷೇತ್ರದ ವಾತಾವರಣ ಕಂಡು ಬಹಳಷ್ಟು ಸಂತಸಪಟ್ಟರು. ಪೀಠದ ಅಭಿವೃದ್ಧಿ ಕೆಲಸ-ಕಾರ್ಯಗಳ ಬಗ್ಗೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದರು. ಮಠದ ಪರಂಪರೆ, ಇತಿಹಾಸ, ಪಂಚಮಸಾಲಿ ಸಮಾಜದ ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.ಅಮಿತ್ ಶಾ ಅವರಿಗೆ ದೇವರು ಉತ್ತಮ ಆಯುರಾರೋಗ್ಯ ನೀಡಲಿ ಎಂದು ವಚನಾನಂದ ಮಹಾಸ್ವಾಮೀಜಿಗಳು ಆಶೀರ್ವಾದ ಮಾಡಿದರು. ರಾಜ್ಯದಲ್ಲಿ ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲೇಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಣತೊಟ್ಟಿದ್ದು, ರಾಜ್ಯದಲ್ಲಿ ಬಿಜೆಪಿ ಅಬ್ಬರ ಪ್ರಚಾರ ಮಾಡುತ್ತಿದ್ದಾರೆ.