Connect with us

Dvgsuddi Kannada | online news portal | Kannada news online

ಹರಿಹರದ ಪಂಚಮಸಾಲಿ ಪೀಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ; ವಚನಾನಂದ ಶ್ರೀಗಳೊಂದಿಗೆ ಸಮಾಲೋಚನೆ

ದಾವಣಗೆರೆ

ಹರಿಹರದ ಪಂಚಮಸಾಲಿ ಪೀಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ; ವಚನಾನಂದ ಶ್ರೀಗಳೊಂದಿಗೆ ಸಮಾಲೋಚನೆ

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿರುಸಿನ ಪ್ರಚಾರದ ಮಧ್ಯೆ ಬಿಡುವು ಮಾಡಿಕೊಂಡು ಕೇಂದ್ರ ಗೃಹ ಸಚಿವ ಅಮಿತ್​ ಶಾ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ, ಪೀಠಾಧಿಪತಿ ವಚನಾನಂದ ಶ್ರೀಗಳ ಆಶೀರ್ವಾದ ಪಡೆದರು.

ಶ್ರೀಗಳ ಜೊತೆ ಅಮಿತ್​ ಶಾ ಅವರು ಸಮಾಲೋಚನೆ ನಡೆಸಿದರು. ಹರ ಕ್ಷೇತ್ರದ ವಾತಾವರಣ ಕಂಡು ಬಹಳಷ್ಟು ಸಂತಸಪಟ್ಟರು. ಪೀಠದ ಅಭಿವೃದ್ಧಿ ಕೆಲಸ-ಕಾರ್ಯಗಳ ಬಗ್ಗೆ ಅಮಿತ್​ ಶಾ ಮೆಚ್ಚುಗೆ ವ್ಯಕ್ತಪಡಿಸಿದರು. ಮಠದ ಪರಂಪರೆ, ಇತಿಹಾಸ, ಪಂಚಮಸಾಲಿ ಸಮಾಜದ ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.ಅಮಿತ್​ ಶಾ ಅವರಿಗೆ ದೇವರು ಉತ್ತಮ ಆಯುರಾರೋಗ್ಯ ನೀಡಲಿ ಎಂದು ವಚನಾನಂದ ಮಹಾಸ್ವಾಮೀಜಿಗಳು ಆಶೀರ್ವಾದ ಮಾಡಿದರು. ರಾಜ್ಯದಲ್ಲಿ ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲೇಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಪಣತೊಟ್ಟಿದ್ದು, ರಾಜ್ಯದಲ್ಲಿ ಬಿಜೆಪಿ ಅಬ್ಬರ ಪ್ರಚಾರ ಮಾಡುತ್ತಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top