ಡಿವಿಜಿ ಸುದ್ದಿ, ದಾವಣಗೆರೆ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅ.23 ಹಾಗೂ 24 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಅ.23 ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು ಸಂಜೆ 6.30 ಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹಿರೇಕಲ್ಮಠಕ್ಕೆ ಆಗಮಿಸುವರು. ಬಳಿಕ ಸ್ಥಳೀಯವಾಗಿ ನಡೆಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ತೆರಳಿ ವಾಸ್ತವ್ಯ ಮಾಡುವರು.
ಸಚಿವರು ಅ. 24 ರಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಹರಿಹರ ತಾಲ್ಲೂಕು ಬೆಳ್ಳೂಡಿಗೆ ಆಗಮಿಸಿ, ಕನಕಗುರುಪೀಠಕ್ಕೆ ಭೇಟಿ ನೀಡಿ, ಮಠದಲ್ಲಿ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 3 ಗಂಟೆಗೆ ಹಾವೇರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



