ದಾವಣಗೆರೆ: ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶೇ. 80ರಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಸಂಘಟಿಸಲು ರಾಜ್ಯದಾದ್ಯಂತ ಬಿಜೆಪಿಯಿಂದ ‘ಗ್ರಾಮ ಸ್ವರಾಜ್ಯ’ ಕಾರ್ಯಕ್ರಮ ನಡೆಸುತ್ತಿದ್ದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ 6 ತಂಡಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರಮೋದಿ , ಸಿಎಂ ಯಡಿಯೂರಪ್ಪ ಸರ್ಕಾರಗಳು ಹೆಚ್ಚಿನ ಹಣವನ್ನು ನೀಡುತ್ತಿವೆ. ಇದರ ಪೂರ್ಣ ಸದುಪಯೋಗವಾಗಲು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸಲು ಈ ಕಾರ್ಯಕ್ರಮ ನೆರವು ಆಗಲಿದೆ ಎಂದು ತಿಳಿಸಿದರು.



