Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ಷೇಪಾರ್ಹ ಪದ ಬಳಕೆ ನಟ ಉಪೇಂದ್ರ ಬಳಿಕ ಸಚಿವ ಎಸ್. ಎಸ್ ಮಲ್ಲಿಕಾರ್ಜುನ ವಿರುದ್ಧ ದೂರು

n5282883001692110024212d96975d633d2e3db82641394ecde90d57121c9e3bd4ab76feb3e5143db13be71

ದಾವಣಗೆರೆ

ದಾವಣಗೆರೆ: ಅಕ್ಷೇಪಾರ್ಹ ಪದ ಬಳಕೆ ನಟ ಉಪೇಂದ್ರ ಬಳಿಕ ಸಚಿವ ಎಸ್. ಎಸ್ ಮಲ್ಲಿಕಾರ್ಜುನ ವಿರುದ್ಧ ದೂರು

ಬೆಂಗಳೂರು: ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ ಎಂದು ಸಾಮಾಜಿಕ ಜಾಲ‌ತಾಣದ ಲೈವ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕರಣ ದಾಖಲಾಗಿತ್ತು.‌ಉಪೇಂದ್ರ ಅವರ ಹೇಳಿಕೆ ಬಳಿಕ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಪ್ರಜಾಕೀಯ ಪಕ್ಷದ ಕಾರ್ಯಕರ್ತರು ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಚಿವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ನಟ ಉಪೇಂದ್ರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವವರು, ಧಮ್ಮು, ತಾಕತ್‌ ಇದ್ದರೆ ಸಚಿವರ (ಎಸ್. ಮಲ್ಲಿಕಾರ್ಜುನ) ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಿ ಎಂದು ಪ್ರಜಾಕೀಯ ಕಾರ್ಯಕರ್ತರು ಸವಾಲು ಹಾಕಿದ್ದಾರೆ.

ಸಚಿವರು ನಟ ಉಪೇಂದ್ರ ಅವರು ಬಳಸಿದ್ದ ಪದವನ್ನೇ ಬಳಸಿದ್ದಾರೆ. “ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ” ಎಂದು ಹೇಳಿದ್ದ ನಟನ ವಿರುದ್ಧ ವಿವಿಧೆಡೆ ಎಫ್‌ಐಆರ್‌ ದಾಖಲಾಗಿತ್ತು. ಈಗ ಸಚಿವರು “ಊರನ್ನು ಹೊಲೆಗೇರಿ ಮಾಡಬೇಡಿʼʼ ಎಂದು ವಿಡಿಯೋ ದಲ್ಲಿ ಹೇಳಿರುವುದು ಕಂಡುಬಂದಿದೆ. ಹೀಗಾಗಿ ದಿವಾಕರ್‌ ಎಂಬುವವರು ನೀಡಿದ ದೂರಿನ ಮೇರೆಗೆ ರಾಜಾಜಿನಗರ ಠಾಣೆಯಲ್ಲಿ ಪೊಲೀಸರು ಎನ್‌ಸಿಆರ್‌ ದಾಖಲಿಸಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನ ನಡೆಸಿದ್ದು, ಈ ಸಂದರ್ಶನದ ವಿಡಿಯೊವನ್ನು ನಮ್ಮ ಮಲ್ಲಣ್ಣ @NammaMallanna ಎಂಬ ಫೇಸ್ ಬುಕ್ , ಯೂಟ್ಯೂಬ್ ಚಾನಲ್ ನಲ್ಲಿ ಮೇ 9ರಂದು ಅಪ್ಲೋಡ್‌ ಮಾಡಿದೆ. ಅದರಲ್ಲಿ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಮಲ್ಲಿಕಾರ್ಜುನ್‌ ಅವರು ಹೇಳಿದ್ದೇನು?: ಸಂದರ್ಶನದಲ್ಲಿ ಮಲ್ಲಿಕಾರ್ಜಿನ್‌ ಅವರ ಪತ್ನಿ‌ ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ನಗರದ ಅಶೋಕ್‌ ಥಿಯೇಟರ್‌ ಬಳಿ ನಿರ್ಮಾಣಗೊಂಡಿರುವ ಅಂಡರ್‌ ಪಾಸ್‌ ಬಗ್ಗೆ ಅಭಿಪ್ರಾಯ ಕೇಳಿದಾಗ, ಇದನ್ನು ನೀವು ಆ ಸೀದ್ದೇಶ್ವರ್ (ಸಂಸದರು) ಅವರಲ್ಲಿ ಕೇಳಬೇಕು. ಅದು ಅಸಮರ್ಪಕವಾಗಿದೆ. ಈ ಬಗ್ಗೆ ಹಲವು ಬಾರಿ ನಾನು ಪ್ರಶ್ನೆ ಮಾಡಿದ್ದೆ, ಸಂಬಂಧಪಟ್ಟ ಇಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದೆ. ʼʼಊರನ್ನು ಹೊಲೆಗೇರಿ ಮಾಡಬೇಡಿʼʼ ಅಂತ ಹೇಳಿದ್ದೆ ಎಂದು ಮಲ್ಲಿಕಾರ್ಜುನ್ ಅವರು ಹೇಳಿರುವುದು ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಉಪೇಂದ್ರ‌ ವಿರುದ್ಧ ಕೋರ್ಟ್ ಮೆಟ್ಟಿಲು ಹತ್ತಿರೋ ಜನರು ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಯಾವಾಗ ಎಫ್ ಐ ಆರ್ ದಾಖಲು ಮಾಡ್ತಿರಾ? ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದಾರೆ. ಸಚಿವರು ಮಾತನಾಡಿರುವ ವಿಡಿಯೋದಲ್ಲಿ 19.28 ರಿಂದ 19.50 ನಿಮಿಷಗಳ ವರೆಗೆ ಮಾತನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. (ವಿಡಿಯೋ ಲಿಂಕ್ https://youtube.com/watch?v=HOmPklFB3-o&feature=share8)

ವೀಡಿಯೋ ವೈರಲ್ ಆಗಿರುವ ಬಗ್ಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್‌ ಸ್ಪಷ್ಟನೆ ನೀಡಿದ ಅವರು, ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ನಾನು ಆ ರೀತಿಯಾಗಿ ಹೇಳಿಲ್ಲ ಎಂದು ಜಾರಿಕೊಂಡಿದ್ದಾರೆ. ಗಾಧೆ ಮಾತನ್ನು ಬಳಸಿಲ್ಲ, ಒಳ್ಳೇದು ಮಾಡಿ ಹೊಲಸು ಮಾಡಬೇಡಿ ಅಂತ ಹೇಳಿದ್ದೇವೆ ಅಷ್ಟೇ. ಅದನ್ನು ನೀವು, ಅವರು ತಿರುಚಿದ್ದೀರಿ. ನಟ ಉಪೇಂದ್ರ ಅವರ ಪ್ರಕರಣ ಬಗ್ಗೆ ನನಗೆ ಏನು ಗೊತ್ತಿಲ್ಲ‌ ಎಂದು ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top