ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಕ್ಷಣ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.
ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ದಾವಣಗೆರೆ ನಗರದ ಎಸ್. ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಬೆಂಗಳೂರಿನ ಸ್ಪರ್ಷ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿದೆ. ಬೆಳಿಗ್ಗೆ ಉಪಾಹಾರ ಸೇವಿಸಿದ್ದ ಶಾಮನೂರು ಶಿವಶಂಕರಪ್ಪರು ಆರಾಮಾಗಿದ್ದರು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು,ಯಾವುದೇ ತೊಂದರೆ ಇಲ್ಲ. ಆತಂಕಪಡುವ ಅಗತ್ಯವಿಲ್ಲ ಕುಟುಂಬದ ಆಪ್ತರು ತಿಳಿಸಿದ್ದಾರೆ.



