ದಾವಣಗೆರೆ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಚಿತ್ರದುರ್ಗ-ದಾವಣಗೆರೆ ಹಾಗೂ ದಾವಣಗೆರೆ-ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದ ಹಿನ್ನೆಲೆ ಮಹಾನಗರ ಪಾಲಿಕೆ ಆವರಣದಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ವಿಜಯೋತ್ಸವ ಆಚರಿಸಿದರು. ಮೇಯರ್ ಎಸ್.ಟಿ.ವೀರೇಶ್ ನೇತೃತ್ವದಲ್ಲಿ ಜಮಾಯಿಸಿದ ಪಾಲಿಕೆಯ ಬಿಜೆಪಿ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಶಿಲ್ಪಾ ಜಯಪ್ರಕಾಶ್, ಎಲ್.ಡಿ.ಗೋಣೆಪ್ಪ, ಕೆ.ಪ್ರಸನ್ನಕುಮಾರ್, ಸೋಗಿ ಶಾಂತಕುಮಾರ್, ವೀರೇಶ್ ಪೈಲ್ವಾನ್, ಸೌಮ್ಯ ನರೇಂದ್ರ, ಉಮಾ ಪ್ರಕಾಶ್, ಯಶೋಧ ಯಗ್ಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.