Connect with us

Dvgsuddi Kannada | online news portal | Kannada news online

ದಾವಣಗೆರೆ: ಪರಿಷತ್ ಚುನಾವಣೆ ಎರಡು ದಿನ  ಮದ್ಯ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ಪರಿಷತ್ ಚುನಾವಣೆ ಎರಡು ದಿನ  ಮದ್ಯ ಮಾರಾಟ ನಿಷೇಧ

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಸುವ ಹಿನ್ನೆಲೆ ದಾವಣಗೆರೆ ಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಡಿ. 08 ರಿಂದ 10 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತ ನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಡಿ.08 ರಂದು ಸಂಜೆ 4 ಗಂಟೆಯಿಂದ ಡಿ. 10 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿದೆ. ಇದರನ್ವಯ ಜಿಲ್ಲೆಯಾದ್ಯಂತ ಮದ್ಯವನ್ನು ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಹಾಗೂ ಯಾವುದೇ ಇತರ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಮಾರಾಟ ಮಾಡಬಾರದು. ಈ ದಿವಸಗಳನ್ನು ಶುಷ್ಕದಿವಸಗಳೆಂದು ಘೋಷಿಸಿಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top