Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಧಾನ ಪರಿಷತ್ ಚುನಾವಣೆ; ಜೂನ್ 3 ಮತದಾನ, ಜೂ.6 ಮತ ಎಣಿಕೆ- ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್

IMG 20240503 200242

ದಾವಣಗೆರೆ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆ; ಜೂನ್ 3 ಮತದಾನ, ಜೂ.6 ಮತ ಎಣಿಕೆ- ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್

ದಾವಣಗೆರೆ: ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ಮತದಾನ, ಜೂ.6 ಮತ ಎಣಿಕೆ ನಡೆಯಲಿದೆ. ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಮತದಾರರ ನೊಂದಣಿಗೆ ಮೇ 6 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಶುಕ್ರವಾದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ವಿಧಾನ ಪರಿಷತ್ ಚುನಾವಣೆ ಕುರಿತು ಮಾಹಿತಿ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ಜಿಲ್ಲೆಯಲ್ಲಿ ಮೂರು ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆಯನೂರು ಮಂಜುನಾಥ್ ಅವರು ನೈರುತ್ಯ ಪದವೀಧರರ ಕ್ಷೇತ್ರದ ಸದಸ್ಯರಾಗಿದ್ದು ಏಪ್ರಿಲ್ 19 ರಂದು ರಾಜೀನಾಮೆ ನೀಡಿದ್ದರು. ಎಸ್.ಎಲ್.ಭೋಜೆಗೌಡ ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿಯವರು ಸದಸ್ಯರಾಗಿದ್ದು ಇವರ ಅವಧಿ ಜೂನ್ 21 ಕ್ಕೆ ಮುಕ್ತಾಯಗೊಳ್ಳುವುದರಿಂದ ಈ ಮೂರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು ಮೇ 16 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುವರು ಮತ್ತು ನೈರುತ್ಯ ಶಿಕ್ಷಕರ, ಪದವೀಧರ ಕ್ಷೇತ್ರಕ್ಕೆ ಮೈಸೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು ಜಿಲ್ಲಾಧಿಕಾರಿ ಸಹಾಯಕ ಚುನಾವಣಾಧಿಕಾರಿಯಾಗಿರುವರು.

2023 ರ ಡಿಸೆಂಬರ್ ಅಂತ್ಯಕ್ಕೆ ಮತದಾರರ ವಿವರ; ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿದ್ದು ಗಂಡು 2564, ಮಹಿಳೆ 1384 ಸೇರಿ 3948 ಮತದಾರರಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾ; ಬಸವಪಟ್ಟಣ-1 ಮತ್ತು 2 ನೇ ಹೋಬಳಿ, ಸಂತೆಬೆನ್ನೂರು-1 ಮತ್ತು 2 ನೇ ಹೋಬಳಿ, ಚನ್ನಗಿರಿ ತಾ; ಕಸಬಾ, ಉಬ್ರಾಣಿ ಹೋಬಳಿ, ದೇವರಹಳ್ಳಿ ಸೇರಿ ಒಟ್ಟು ಗಂಡು 688, ಹೆಣ್ಣು 246 ಸೇರಿ ಒಟ್ಟು 934, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾ; ಬಸವಪ್ಟಣ-1 ಮತ್ತು 2 ಹೋಬಳಿ, ಸಂತೆಬೆನ್ನೂರು 1 ಮತ್ತು 2, ಚನ್ನಗಿರಿ ತಾ; ಕಸಬಾ, ಉಬ್ರಾಣಿ ಹೋಬಳಿ, ದೇವರಹಳ್ಳಿ ಗ್ರಾಮ ಒಳಗೊಂಡಂತೆ 3900 ಗಂಡು, 2096 ಹೆಣ್ಣು ಸೇರಿ 6296 ಮತದಾರರಿದ್ದಾರೆ.

ಮತದಾರರ ನೊಂದಣಾಧಿಕಾರಿಗಳು; ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಸಹಾಯಕ ಮತದಾರರ ನೊಂದಣಾಧಿಕಾರಿಗಳಾಗಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಯೋಜಿತ ಅಧಿಕಾರಿಗಳಾಗಿರುತ್ತಾರೆ. ಮತದಾರರ ನೊಂದಣಿ ವೇಳೆ ಒಬ್ಬರಿಂದ ಗರಿಷ್ಠ 5 ಅರ್ಜಿಗಳನ್ನು ಮಾತ್ರ ಮತದಾರರ ನೊಂದಣಿಗೆ ಸ್ವೀಕರಿಸಲಾಗುತ್ತದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top