ದಾವಣಗೆರೆ: ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ -3 ಅಭ್ಯರ್ಥಿಗಳ ಗುರಿಯನ್ನು ಹೊಂದಿದ್ದು, 1 ಬಾಕಿ ಉಳಿದಿದೆ. ಇದರಡಿ ಪಡೆಯುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯ ತಿಳಿಸಿದ್ದಾರೆ.



