ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿಯನ್ನು (Modern dairy training for farmers) ಮಾರ್ಚ್ 10 ಮತ್ತು 11 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮುಖ್ಯಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.