ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆ ದಿನ

ದಾವಣಗೆರೆ: 2025-26 ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ (Morarji Desai Residential Schools) ವಸತಿ ಶಾಲೆಗಳ 6ನೇ ತರಗತಿ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ಮತ್ತು ಇತರೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಂದೆ,ತಾಯಿ ಹಿರಿಯರನ್ನು ಆರೈಕೆ ಮಾಡದಿದ್ದಲ್ಲಿ ಆಸ್ತಿ ವಿಲ್, ದಾನಪತ್ರ ರದ್ದಿಗೆ ಅವಕಾಶ; ಕಂದಾಯ ಸಚಿವ

5ನೇ ತರಗತಿ ಪಾಸಾದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ (ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿದೆ.

ಅಡಿಕೆ ಮಂಡಳಿ ಸ್ಥಾಪನೆ, ಆಮದು ಶುಲ್ಕ ಹೆಚ್ಚಳಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಆಗ್ರಹ

ವಸತಿ ಶಾಲೆಗಳಲ್ಲಿ ಉಚಿತ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರಗಳೊಂದಿಗೆ ಇತರ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಪ್ರವೇಶ ಬಯಸುವ ಅಲ್ಪಸಂಖ್ಯಾತರ ಮತ್ತು ಇತರೆ ಪ್ರವರ್ಗಗಳ ಆಸಕ್ತ ವಿದ್ಯಾರ್ಥಿಗಳು ಸಂಬಂಧಿಸಿದ ಸೇವಾ ಸಿಂಧು ಪೋರ್ಟಲ್ ವೈಬ್‍ಸೈಟ್ https://sevasindhuservices.karnataka.gov.in ಮೂಲಕ ಮಾರ್ಚ್ 25, 2025 ರೊಳಗಾಗಿ ಅರ್ಜಿ ಸಲ್ಲಿಸಿಬಹುದು.

ದಾವಣಗೆರೆ:ಆಧುನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಉಚಿತ ಸೇವೆ ಪಡೆಯಲು ಸಮೀಪದ ಜಿಲ್ಲಾ ಅಲ್ಪ ಸಂಖ್ಯಾತರ ಕಚೇರಿ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts