ದಾವಣಗೆರೆ: ಕಳೆದ ವಿಧಾನಸಭೆ ಸೋಲಿನ ಸೇಡಿಗೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡದೆ, ಖಾಲಿ ಚೊಂಬು ಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ, ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೆಗೆದುಕೊಳ್ಳುತ್ತಿದರ. ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸಿ ಮತ ಕೇಳುವ ನೈತಿಕತೆ ಇಲ್ಲ. ರಾಜ್ಯದ ರೈತರಿಗೆ ಅನ್ಯಾಯ ಮಾಡಿದ್ದಾರೆಂದು ಆರೋಪಿಸಿದರು.
ರಾಜ್ಯದಲ್ಲಿ ಭೀಕರ ಬರ, ಕುಡಿಯವ ನೀರು ಸಮಸ್ಯೆ, ಜಾನುವಾರುಗಳಿಗೆ ಮೇವು ಬೇಕಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಪರಿಹಾರ ಕೇಳಿದರೆ, ಕೇಂದ್ರ ಸರ್ಕಾ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ.ಪೂರ್ಣ ಪ್ರಮಾಣದ ಬರ ಪರಿಹಾರ ನೀಡದ ಕೇಂದ್ರ ಸರ್ಕಾರ ವಿರುದ್ಧ ಜನ ಗೋ ಬ್ಯಾಕ್ ಹೋರಾಟ ಮಾಡಬೇಕು. ಕಾಂಗ್ರೆಸ್ ಕೂಡ ಈ ಹೋರಾಟ ಮಾಡಲಿದೆ.ಈ ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಲಿಸಲಿದ್ದು, 27 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಶಾಸಕರಾರ ಶಾಂತನಗೌಡ, ಶಿವಗಂಗಾ ಬಸವರಾಜ್ , ಬಸವಂತಪ್ಪ ಸೇರಿದಂತೆ ಮತ್ತಿತರರು ಇದ್ದರು.