ದಾವಣಗೆರೆ: ದಾವಣಗೆರೆ ಈ ಮೊದಲು ಕರ್ನಾಟದಕ ಮ್ಯಾಂಚೆಸ್ಟರ್ ಸಿಟಿಯಾಗಿತ್ತು. ಮುಂದಿನ ದಿನಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಫ್ಟ್ವೇರ್ ಪಾರ್ಕ್, ವಿಮಾನ ನಿಲ್ದಾಣ, ಆರೋಗ್ಯ ಸುಧಾರಣೆ ಸೇರಿವ ವಿಶೇಷ ಆರ್ಥಿಕ ವಲಯ ಸ್ಥಾಪನೆ ಮಾಡಲಾಗುವುದು. ಜೊತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತ್ಯಾವಣಗಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಿ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗಾಯಿತ್ರಿ ಸಿದ್ಧೇಶ್ವರ್ ಅವರು 2 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ ಎಂದರು.
ನಾನಿ 18-20 ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ಧೇನೆ. ಎಲ್ಲರ ಬಾಯಿಯಲ್ಲಿ ಮೋದಿ ಮೋದಿ ಎಂಬ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್ ಗೆಲ್ಲುವ ಒಂದೆರಡು ಕ್ಷೇತ್ರದ ಹೆಸರು ಹೇಳಲಿ ಎಂದು ಸವಾಲು ಹಾಕಿದರು.ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರ ಬಲಿದಿಂದ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತಿದೆ. ಜನ ಬುದ್ಧಿವಂತರಾಗಿದ್ದಾರೆ. ಮೋದಿ ಜೀ ಅವರ ಆಡಳಿತ ಮೆಚ್ಚಿಕೊಂಡಿದ್ದಾರೆ. ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು, ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗುವುದು ನಿಶ್ಚಿತ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಗಾಯಿತ್ರಿ ಸಿದ್ದೇಶ್ವರ್ ಅವರು ಇಲ್ಲಿ ಗೆಲ್ಲುವುದು, ನರೇಂದ್ರ ಮೋದಿ ಅವರ ಪ್ರಧಾನಿ ಆಗುವುದು ಸತ್ಯ ಎಂದರು.