Connect with us

Dvgsuddi Kannada | online news portal | Kannada news online

ದಾವಣಗೆರೆ: ನೀತಿ ಸಂಹಿತೆ ಉಲ್ಲಂಘನೆ; 14.32 ಕೋಟಿ ಮೌಲ್ಯದ ನಗದು, ಮದ್ಯ ಸಹಿತ ವಿವಿಧ ವಸ್ತು ವಶ: ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್

n5329117621693369622696b2c54519a406c96180694ed96ff43fb5ec52b31971501ee978e8797ffd5d0aac

ದಾವಣಗೆರೆ

ದಾವಣಗೆರೆ: ನೀತಿ ಸಂಹಿತೆ ಉಲ್ಲಂಘನೆ; 14.32 ಕೋಟಿ ಮೌಲ್ಯದ ನಗದು, ಮದ್ಯ ಸಹಿತ ವಿವಿಧ ವಸ್ತು ವಶ: ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್

ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು, ನೀತಿ ಸಂಹಿತೆಯು ಮಾರ್ಚ್ 16 ರಿಂದಲೇ ಜಾರಿಯಲ್ಲಿದ್ದು ಏಪ್ರಿಲ್ 24 ರ ವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ರೂ.14,32,07,731 ಮೌಲ್ಯದ ವಿವಿಧ ವಸ್ತುಗಳು, ಮದ್ಯ, ಮಾದಕ ವಸ್ತು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಚುನಾವಣಾ ದಿನಾಂಕ ಪ್ರಕಟವಾದ ದಿನದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಜಿಲ್ಲೆಯಾದ್ಯಂತ 32 ಚೆಕ್ ಪೋಸ್ಟ್, 21 ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವಲೆನ್ಸ್ ತಂಡ, ಅಬಕಾರಿ ಜಾಗೃತ ದಳ, ವಾಣಿಜ್ಯ ತೆರಿಗೆ ಇಲಾಖೆ ತಂಡ ಸೇರಿದಂತೆ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಎಫ್‍ಎಸ್‍ಟಿಯಿಂದ ರೂ.75,62,100 ನಗದು ವಶ, ಎಸ್‍ಎಸ್‍ಟಿಯಿಂದ ರೂ.95,35,536 ನಗದು ವಶ, ಎಫ್.ಎಸ್.ಟಿ.ಯಿಂದ 400 ಟವರ್ ಫ್ಯಾನ್, 56.36 ಗ್ರಾಂ ಚಿನ್ನ, 579 ಸೀರೆಗಳನ್ನು ವಶಪಡಿಸಿಕೊಂಡಿದ್ದು ಇದರ ಮೌಲ್ಯ ರೂ.8,26,530 ಗಳಾಗಿರುತ್ತದೆ.

ಚೆಕ್‍ಪೋಸ್ಟ್‍ಗಳಲ್ಲಿ 17 ಮೊಬೈಲ್, 300 ಜೀನ್ಸ್ ಪ್ಯಾಂಟ್, ರೂ.12,52,02,115 ಮೌಲ್ಯದ 20.874 ಕೆ.ಜಿ. ಬಂಗಾರ ಸೇರಿ ರೂ.12,60,98,095 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೇ ಅಬಕಾರಿ ಇಲಾಖೆಯಿಂದ ರೂ.573013 ಮೌಲ್ಯದ 1570.41 ಲೀ ಮದ್ಯ ವಶಪಡಿಸಿಕೊಂಡಿದೆ. ಪೊಲೀಸ್ ಇಲಾಖೆಯಿಂದ ರೂ.210703.45 ಮೌಲ್ಯದ 542.494 ಲೀ ಮದ್ಯ ಹಾಗೂ ರೂ.12000 ಮೌಲ್ಯದ 158 ಗ್ರಾಂ ಗಾಂಜಾವಶ ಪಡಿಸಿಕೊಂಡಿದೆ. ಇಲ್ಲಿಯವರೆಗೆ ವೆಚ್ಚಕ್ಕೆ ಸಂಬಂಧಿಸಿದ 3 ಎಫ್‍ಐಆರ್ ಹಾಗೂ 2 ಎಫ್‍ಎಸ್‍ಟಿಯಿಂದ ಹಾಗೂ ಅಬಕಾರಿ ಕಾಯಿದೆಯಡಿ 728 ಪ್ರಕರಣ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top