ದಾವಣಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ದೇಶದ ಎರಡನೇ ಹಂತ, ರಾಜ್ಯದಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ ಗಡಿ ಹೊಂದಿರುವ ಜಿಲ್ಲೆಗಳಾದ ಉಡುಪಿ-ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯುವುದರಿಂದ ಈ ಜಿಲ್ಲೆಯ ಗಡಿಯಿಂದ 5 ಕಿ.ಮೀ ಜಿಲ್ಲಾ ವ್ಯಾಪ್ತಿಯಲ್ಲಿ ಏ.24 ರಂದು ಸಂಜೆ 5.00 ಗಂಟೆಯಿಂದ ಏ.26 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದಿಂದ 05 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಮುಚ್ಚಲು ಹಾಗೂ ಎಲ್ಲ ಬಗೆಯ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.