ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕ್ಷಣ, ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದ್ದು, ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿ ನಡುವೆ ನೇರ- ನೇರಾ ಸ್ಪರ್ಧೆ ಏರ್ಪಟ್ಟಿದೆ. ಒಂದು ಸುತ್ತಿನಲ್ಲಿ ಬಿಜೆಪಿ ಗಾಯತ್ರಿ ಸಿದ್ದೇಶ್ವರ ಮುನ್ನಡೆ ಸಾಧಿಸಿದರೆ, ಮತ್ತೊಂದು ಸುತ್ತಿನಲ್ಲಿ ಕಾಂಗ್ರೆಸ್ ನ ಡಾ. ಪ್ರಭಾ ಮಲ್ಲಿಕಾರ್ಜುನ ಮುನ್ನಡೆ ಸಾಧಿಸುತ್ತಿದ್ದಾರೆ. ಇಬ್ಬರ ನಡುವೆ ಹಾವು-ಏಣಿ ಆಟ ಮುಂದುವರೆದಿದೆ.
ನಾಲ್ಕನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರಗೆ ಮತ್ತೆ ಹಿನ್ನೆಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದು, 3112 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು, ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನೆಡೆ ಆಗಿದ್ದು, ಐದನೇ ಸುತ್ತಿನ ಮತ ಎಣಿಕೆಯಲ್ಲಿ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡಾ. ಪ್ರಭಾ ಮಲ್ಲಿಕಾರ್ಜುನ್ 32,544 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ 26,226 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು 3,312 ಮತಗಳನ್ನು ಪಡೆದಿದ್ದಾರೆ. ಈ ಆರಂಭಿಕ ಟ್ರೆಂಡ್ ನೋಡುತ್ತಿದ್ದರೆ ದಾವಣಗೆರೆಯಲ್ಲಿ ಯಾರೇ ಗೆದ್ದರೂ ಅಲ್ಪ ಮತ ಅಂತರ ಗೆಲುವು ಲಭಿಸಲಿದೆ.



