ದಾವಣಗೆರೆ: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಜೆ ಹೆಚ್ ಪಟೇಲ್ ಅವರ ಮಗ, ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೇಜಸ್ವಿ ಪಟೇಲ್ ಅವರ ಕಾರಿಗನೂರಿನ ನಿವಾಸಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಭೇಟಿ ಮಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಬೆಂಬಲ ಕೋರಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಬ್ಬರೂ ನಾಯಕರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಗಾಯತ್ರಿ ಸಿದ್ದೇಶ್ವರ ಅವರನ್ನು ಸಂಸದರಾಗಿ ಮಾಡಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು .ಈ ಸಂದರ್ಭದಲ್ಲಿ ಹರಿಹರದ ಮಾಜಿ ಶಾಸಕ ಎಚ್ಎಸ್ ಶಿವಶಂಕರ್, ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಬಿ.ಜೆ. ಅಜಯ್ ಕುಮಾರ್ ಮತ್ತು ದಾವಣಗೆರೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ನಿಕಟ ಪೂರ್ವ ಅಧ್ಯಕ್ಷ ವೀರೇಶ್ ಹನಗವಾಡಿ ಹಾಗೂ ಜೆ ಎಚ್ ಪಟೇಲ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.



