Connect with us

Dvgsuddi Kannada | online news portal | Kannada news online

ನಾಳೆ ದಾವಣಗೆರೆಯ ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ; ರಾಜ್ಯ ಭೇಟಿಯ ವೇಳಾಪಟ್ಟಿ ವಿವರ ಇಲ್ಲಿದೆ

ದಾವಣಗೆರೆ

ನಾಳೆ ದಾವಣಗೆರೆಯ ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ; ರಾಜ್ಯ ಭೇಟಿಯ ವೇಳಾಪಟ್ಟಿ ವಿವರ ಇಲ್ಲಿದೆ

ದಾವಣಗೆರೆ: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆ ಜತೆ ದಾವಣಗೆರೆಲ್ಲಿ ಬೆಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದ ಬೃಹತ್ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.

ಚುನಾವಣೆ ಸಮೀಪದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಲ್ಲಿ ಮೋದಿ ಅವರ ಏಳನೇ ಭೇಟಿ ಇದಾಗಿದೆ. ನಾಳೆ ಬೆಳಗ್ಗೆ ನವದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ 10.10ಕ್ಕೆ ಹೆಚ್​ಎಎಲ್​​ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಲಿರುವ ಪಿಎಂ, 10.45 ರಿಂದ 12 ಗಂಟೆವರೆಗೂ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ.

ನಂತರ ಬೆಂಗಳೂರಿಗೆ ವಾಪಸ್ಸಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಕೃಷ್ಣರಾಜಪುರ ವೈಟ್ ಫೀಲ್ಡ್ ನಡುವಿನ ನೂತನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದು, ಈ ಮಾರ್ಗದ ಮೊದಲ ಮೆಟ್ರೋದಲ್ಲಿ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆಗೆ ಪ್ರಯಾಣಿಸಲಿರುವ ಮೋದಿ ಮಧ್ಯಾಹ್ನ 3.30ಕ್ಕೆ ಬಿಜೆಪಿ ನಾಲ್ಕು ರಥಯಾತ್ರೆಯ ಮಹಾಸಂಗಮದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆಯುವ ಭಾಷಣ ಮಾಡಲಿದ್ದಾರೆ. ದಾವಣಗೆರೆ ಕಾರ್ಯಕ್ರಮ ಮುಗಿಸಿ ಶಿವಮೊಗ್ಗಕ್ಕೆ ತೆರಳಲಿರುವ ಮೋದಿ ಕುವೆಂಪು ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top