ದಾವಣಗೆರೆ: ಅಕ್ರಮವಾಗಿ ಸಚಿವ ಆರ್ . ಶಂಕರ್ ಅವರನ್ನು ಮೇಯರ್ ಮತದಾನ ಪಟ್ಟಿಯಲ್ಲಿ ಸೇರಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪ ತಳ್ಳಿ ಹಾಕಿದ ಸಂಸದ ಜಿ.ಎಂ. ಸಿದ್ದೇಶ್ವರ್, ಕಾಂಗ್ರೆಸ್ ಆರೋಪ ಮಾಡುತ್ತಲೇ ಇರಲಿ. ಬಿಜೆಪಿ ಪಕ್ಷ ಇನ್ನಷ್ಟು ಮೇಲಕ್ಕೆ ಬೆಳೆಯುತ್ತಿದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆರೋಪ ಮಾಡಿದಷ್ಟು, ಬಿಜೆಪಿ ಬೆಳೆಯಲಿದೆ. ಮೇಯರ್ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಈ ಸಲವು ಬಿಜೆಪಿ ಅಧಿಕಾರ ಹಿಡಿಯಲಿದೆ. ಯಾರು ಮೇಯರ್ ಅಭ್ಯರ್ಥಿ ಎಂಬುದು ಇನ್ನೂ ನಿರ್ಧಾರವಾಗಿಲ್ಲ. 23 ರಂದು ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ತಿಳಿಸಿದರು.



