ದಾವಣಗೆರೆ: ನಗರದಲ್ಲಿಂದು ನೂತನವಾಗಿ ನಿರ್ಮಾಣ ಆಗುತ್ತಿರುವ ಹೊಸ KSRTC ಬಸ್ ನಿಲ್ದಾಣ ಕಾಮಗಾರಿಯನ್ನು ಸಂಸದ ಜಿ.ಎಂ. ಸಿದ್ದೇಶ್ವರ ವೀಕ್ಷಿಸಿದರು.
ಈ ವೇಳೆ ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಡಿಸೆಂಬರ್ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ, ಇಂಜನೀಯರ್‌ಗಳಿಗೆ ಸೂಚನೆ ನೀಡಿದರು. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಮೇಯರ್ ಜಯಮ್ಮ ಗೋಪಿನಾಯ್ಕ್, ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಮಾಜಿ ಮೇಯರ್ ಎಸ್.ಟಿ.ವಿರೇಶ್, ಮಾಜಿ ಉಪ ಮೇಯರ್ ಗಾಯಿತ್ರಿ ಕೊಂಡಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ರವೀಂದ್ರ ಮಲ್ಲಾಪುರ ಇತರರು ಉಪಸ್ಥಿತರಿದ್ದರು.



