ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ, ಆಸಗೋಡು, ಪಲ್ಲಾಗಟ್ಟೆ, ಗುರುಸಿದ್ದಾಪುರ ಮತ್ತು ಯರ್ಲಕಟ್ಟೆ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಡಿ 6.20 ಕೋಟಿ ವೆಚ್ಚದ ವಿವಿಧ ರಸ್ತೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಎಸ್.ವಿ.ರಾಮಚಂದ್ರಪ್ಪ, ಸ್ಥಳೀಯ ಚುನಾಯಿತ ಜನ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



