Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ, ನೋಂದಣಿ ಅವಧಿ ಮೇ 31ರವರೆಗೆ ವಿಸ್ತರಣೆ

paddy33

ದಾವಣಗೆರೆ

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ, ನೋಂದಣಿ ಅವಧಿ ಮೇ 31ರವರೆಗೆ ವಿಸ್ತರಣೆ

ದಾವಣಗೆರೆ: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಂಬಲ ಬೆಲೆಯಲ್ಲಿ (minimum support price) ಭತ್ತ (Paddy price) ಖರೀದಿಗೆ ನೊಂದಣಿ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಬೆಂಬಲ ಬೆಲೆ ಎಷ್ಟು..?

  • ಎ.ಗ್ರೇಡ್ ಭತ್ತ ರೂ.2320
  • ಸಾಮಾನ್ಯ ಭತ್ತ ರೂ. 2300

ಕ್ವಿಂಟಾಲ್ ಭತ್ತಕ್ಕೆ ಎ.ಗ್ರೇಡ್ ರೂ.2320, ಸಾಮಾನ್ಯ ಭತ್ತ ರೂ. 2300 ಗಳ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಜಗಳೂರು ಹೊರತುಪಡಿಸಿ ಎಲ್ಲಾ ಎಪಿಎಂಸಿಗಳನ್ನು ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ರೈತರಿಂದ 25 ಕ್ವಿಂಟಾಲ್‍ನಿಂದ ಗರಿಷ್ಠ 50 ಕ್ವಿಂಟಾಲ್‍ವರೆಗೆ ಖರೀದಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top