ದಾವಣಗೆರೆ: ಮನೆ ಮುಂದೆ ಮಲಗಿದ್ದ ವೃದ್ಧನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಕ್ಯಾಂಪ್ನಲ್ಲಿ ನಡೆದಿದೆ.
ಚಂದ್ರಣ್ಣ(65) ಮೃತ ವ್ಯಕ್ತಿಯಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಂದ್ರಣ್ಣನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ಮಲೇಬೆನ್ನೂರು ಪೊಲೀಸರು ತನಿಖೆ ನಡೆಸಿದ್ದಾರೆ. ಜೊತೆಗೆ ಮಲೇಬೆನ್ನೂರು ಪ್ರಮುಖ ರಸ್ತೆಗಳ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದು, ಆರೋಪಿಗಳ ಸುಳಿವು ಮಾತ್ರ ಪತ್ತೆಯಾಗಿಲ್ಲ.