ದಾವಣಗೆರೆ: ಮುರುಘಾ ಶರಣರು ಪೋಕ್ಸೋ ಕಾಯ್ದೆಯಡಿ ಎರಡು ಪ್ರಕರಣ ದಾಖಲಾಗಿ ಬಂಧನದಲ್ಲಿದ್ದಾರೆ. ಈ ಹಿನ್ನಲೆ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಈ ನಿರ್ಧಾರಕ್ಕೆ ಸಮಾಜದ ಕೆಲ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಮಠದಲ್ಲಿ ದೀಕ್ಷೆ ಪಡೆದ ಸ್ವಾಮೀಜಿಗಳು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಠಾಧೀಶರು ಗೌಪ್ಯ ಸಭೆ ನಡೆಸುತ್ತಿದ್ದಾರೆ.
ಮುರುಘಾ ಮಠದ ಆಡಳಿತ ಮಂಡಳಿ ಹಾಗೂ ಕೆಲ ಮುಖಂಡರ ಜೊತೆ ಚರ್ಚಿಸಿ ಶ್ರೀ ಬಸವಪ್ರಭು ಸ್ವಾಮೀಜಿ ನೇಮಕಕ್ಕೆ ನಿರ್ಧಾರ ಮಾಡಿದ್ದಾರೆ. ಬಸವಪ್ರಭು ಶ್ರೀ ಹೆಸರು ಅಂತಿಮಗೊಳಿಸುವಂತೆ ಭಕ್ತರು ಆಗ್ರಹಿಸಿದ್ದಾರೆ.ಎಲ್ಲಾ ಸಮುದಾಯವನ್ನು ಒಟ್ಟಿಗೆ ಕರೆದೊಯ್ಯುವರು ಬಸವಪ್ರಭು ಶ್ರೀಗಳು. ಅವರಿಗೆ ಪ್ರಭಾರ ಪೀಠಾಧ್ಯಕ್ಷ ಸ್ಥಾನ ನೀಡಿದರೆ ಒಳ್ಳೆದು ಎಂದು ದಾವಣಗೆರೆ ಜಿಲ್ಲಾ ಭಕ್ತರು ಒತ್ತಾಯ.



